2017-18ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ನೀಡುವ ಐ.ಎ.ಎಸ್, ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಪೂರ್ವ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಡೆಸುವ ಮೂಲ ದಾಖಲೆಗಳ ಪರಿಶೀಲನೆ ಮತ್ತು ಕೌನ್ಸಿಲಿಂಗ್ ನಡೆಯುವ ದಿನಾಂಕ : 20.07.2017 ಮತ್ತು 21.07.2017.ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ. 2017-18ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ನೀಡುವ ಐ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ಪರೀಕ್ಷಾ ಪೂರ್ವ ತರಬೇತಿಯ ಆಯ್ಕೆಗಾಗಿ ದಿನಾಂಕ: 25.06.2017 ರಂದು ಅಭ್ಯರ್ಥಿಗಳಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ. ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2017-18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-“ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05.08.2017. 2016-17ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ/ದ್ವಿತೀಯ ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡಿ ಮಾರ್ಚ್ ಮತ್ತು ಏಪ್ರಿಲ್ 2017 ರಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31.07.2017. 2017-18 ನೇ ಸಾಲಿಗೆ ಡಿ.ದೇವರಾಜ ಅರಸು ವಿದೇಶಿ ‍ವ್ಯಾಸಂಗ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 31.07.2017 ರ ವರೆಗೆ ವಿಸ್ತರಿಸಲಾಗಿದೆ ಅಡುಗೆಯವರು ಹಾಗೂ ಅಡುಗೆ ಸಹಾಯಕರ ಹುದ್ದೆಗಳ ನೇರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ 2017-18 ನೇ ಸಾಲಿಗೆ IIM/IIT/IISc ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಅಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29.07.2017 2016-17-ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳ ಮಾಹಿತಿಯನ್ನು ಇಲಾಖೆಯ ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ.
ಹಿಂದಿನ ಪುಟಕ್ಕೆ
ಇಲಾಖೆಯ ಪ್ರಮುಖ ಸಾಧನೆಗಳು
ಇಲಾಖೆಯ ಪ್ರಮುಖ ಸಾಧನೆಗಳು
2013-14 ನೇ ಸಾಲಿನಿಂದ ಇಲ್ಲಿಯವರೆಗೆ ಇಲಾಖೆಯ ಪ್ರಮುಖ ಸಾಧನೆಗಳು

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಪ್ರಮುಖ ಕಾರ್ಯಕ್ರಮಗಳನ್ನು ಅನ್‍ಲೈನ್ ಮೂಲಕ ಅನುಷ್ಟಾನಗೊಳಿಸಲಾಗುತ್ತಿದ್ದು, ಡಿ.ಬಿ.ಟಿ, ಹೆಚ್.ಎಂ.ಎಸ್ ಹಾಗೂ ಇ-ಪಾಸ್ ಜಾರಿಗೆ ತರಲಾಗಿದೆ.

ವಿದ್ಯಾಸಿರಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಇದುವರೆಗೆ 195082 ವಿದ್ಯಾರ್ಥಿಗಳು ಪ್ರಯೋಜನ ಪಡೆದಿದ್ದು, ರೂ.228.00 ಕೋಟಿ ವೆಚ್ಚ ಭರಿಸಲಾಗಿದೆ.

2003-04ನೇ ಸಾಲಿನಿಂದ 2013-14ನೇ ಸಾಲಿನವರೆಗೆ ಬಾಕಿ ಇದ್ದ ಶುಲ್ಕ ವಿನಾಯಿತಿ ಮೊತ್ತ ರೂ.165.00 ಕೋಟಿ ಸಂಪೂರ್ಣವಾಗಿ ಮರುಪಾವತಿಸಲಾಗಿದೆ.

ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ದಿ.ಡಿ.ದೇವರಾಜ ಅರಸು ರವರ ಜನ್ಮ ಶತಮಾನೋತ್ಸವವನ್ನು ವರ್ಷವಿಡೀ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ.

436 ಹೊಸ ವಿದ್ಯಾರ್ಥಿನಿಲಯಗಳನ್ನು ಮಂಜೂರು ಮಾಡಲಾಗಿದ್ದು, 43250 ವಿದ್ಯಾರ್ಥಿಗಳು ಪ್ರಯೋಜನ ಪಡೆಯುತ್ತಿದ್ದಾರೆ.

177 ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗಿದ್ದು, 51 ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿವೆ.

ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನವನ್ನು 2279228 ವಿದ್ಯಾರ್ಥಿಗಳಿಗೆ ನೀಡಿದ್ದು, ರೂ.157.42 ಕೋಟಿ ವೆಚ್ಚ ಭರಿಸಲಾಗಿದೆ.

ಮೆಟ್ರಿಕ್-ನಂತರದ ವಿದ್ಯಾರ್ಥಿವೇತನವನ್ನು 876298 ವಿದ್ಯಾರ್ಥಿಗಳಿಗೆ ನೀಡಿದ್ದು, ರೂ.193.29 ಕೋಟಿ ವೆಚ್ಚ ಭರಿಸಲಾಗಿದೆ.

ಶುಲ್ಕ ವಿನಾಯಿತಿ ಕಾರ್ಯಕ್ರಮದಡಿ ವರ್ಷವಾರು ಯೋಜನೆ ಗಾತ್ರ ಹೆಚ್ಚಿಸಿದ್ದು, ಇದುವರೆಗೆ 1045226 ವಿದ್ಯಾರ್ಥಿಗಳಿಗೆ ಮಂಜೂರಾತಿ ನೀಡಿ ರೂ.649.62 ಕೋಟಿ ವೆಚ್ಚ ಭರಿಸಲಾಗಿದೆ.

ಐಎಎಸ್/ಕೆ.ಎ.ಎಸ್/ಬ್ಯಾಂಕಿಂಗ್ ಪರೀಕ್ಷಾ ಪೂರ್ವ ತರಬೇತಿ ನೀಡಿದ್ದು, ಇದುವರೆಗೆ 6 ಅಭ್ಯರ್ಥಿಗಳು ಯು.ಪಿ.ಎಸ್.ಸಿ, 29 ಅಭ್ಯರ್ಥಿಗಳು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದು, 270 ಅಭ್ಯರ್ಥಿಗಳು ಕೆ.ಎ.ಎಸ್ ಮುಖ್ಯ ಪರೀಕ್ಷೆಯನ್ನು ಬರೆದಿರುತ್ತಾರೆ.

99 ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದೇಶಿ ವ್ಯಾಸಂಗಕ್ಕಾಗಿ ರೂ.8.94 ಕೋಟಿ ಅನುದಾನವನ್ನು ನೀಡಲಾಗಿದೆ.

ಹಿಂದುಳಿದ ವರ್ಗಗಳ 1265 ಸಂಘ ಸಂಸ್ಥೆಗಳಿಗೆ ಸಮುದಾಯ ಭವನ ನಿರ್ಮಾಣಕ್ಕಾಗಿ ರೂ.180.00 ಕೋಟಿ ವೆಚ್ಚ ಭರಿಸಲಾಗಿದೆ.