2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಗೆ ಡಿ.ದೇವರಾಜ ಅರಸು ವಿದೇಶಿ ‍ವ್ಯಾಸಂಗ ವೇತನಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.10.2019 ಸಂಜೆ 5.00 PM ಗಂಟೆ ವರೆಗೆ. 2019-20ನೇ ಸಾಲಿನಲ್ಲಿ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ನವೀಕರಣ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಸೌಲಭ್ಯಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.09.2019 ಸಂಜೆ 5.00 PM ಗಂಟೆ ವರೆಗೆ. 2019-20-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ಸಾಮಾನ್ಯ, ಮಾದರಿ, ವಿದ್ಯಾರ್ಥಿ ನಿಲಯಗಳಲ್ಲಿ ಉಳಿಕೆಯಾಗಿರುವ ಸ್ಥಾನಗಳಿಗೆ ಅರ್ಜಿ ಅಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Closed. 2019-20 ನೇ ಸಾಲಿಗೆ ಐ.ಎ.ಎಸ್, ಕೆ.ಎ.ಎಸ್. ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ನಡೆಸುವ ಪ್ರವೇಶ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರದ ಪ್ರತಿಯನ್ನು(Exam Admission Ticket) ಪಡೆದುಕೊಳ‍್ಳುವ ಕುರಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಸೇನಾ ಆಯ್ಕೆ ಪೂರ್ವ ತರಬೇತಿಗೆ ದಿನಾಂಕ:29.08.2019 ಹಾಗೂ 30.08.2019 ರಂದು ನಡೆಯುವ ವೈದ್ಯಕೀಯ/ದೇಹದಾರ್ಢ್ಯತೆ ಪರೀಕ್ಷೆಗೆ ಶೈಕ್ಷಣಿಕ ಅರ್ಹತೆ ಆಧಾರದ ಮೇಲೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ. 2019-20ನೇ ಸಾಲಿಗೆ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ GMAT, GRE ಹಾಗೂ GATE ಪರೀಕ್ಷಾ ಪೂರ್ವ ತರಬೇತಿಯನ್ನು ನೀಡುತ್ತಿದ್ದು, ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :Closed. 2019-20ನೇ ಸಾಲಿನಲ್ಲಿ “ಡಿ.ದೇವರಾಜ ಅರಸು ಪ್ರತಿಭಾ ಪುಸ್ಕಾರ” (ಎಸ್.ಎಸ್.ಎಲ್.ಸಿ/ದ್ವೀತಿಯ ಪಿ.ಯು.ಸಿ) ಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಅರ್ಜಿ ಪ್ರತಿ ಮತ್ತು ದಾಖಲೆಗಳ ಪ್ರತಿಗಳನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ: 26.08.2019 ಸಂಜೆ 5.30 ಗಂಟೆ ವರೆಗೆ ವಿಸ್ತರಿಸಲಾಗಿದೆ. ದಿನಾಂಕ: 1.1.2019 ರಂದು ಇದ್ದಂತೆ ಹೊರಡಿಸಿರುವ ಎಲ್ಲಾ ವೃಂದದ ನೌಕರರ ಅಂತಿಮ ಪದಕ್ರಮ ಪಟ್ಟಿಗಳು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕರಡು ಸೇವಾ (ವೃಂದ ಮತ್ತು ನೇಮಕಾತಿ) ನಿಯಮಗಳು-2019 2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ನೀಡಲಾಗಿರುವ ನವೀಕರಣ ಹಾಗೂ ಹೊಸ ವಿದ್ಯಾರ್ಥಿಗಳ ಮಾಹಿತಿಯನ್ನು ಇಲಾಖೆಯ ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ (ಕ್ರಮ: ಇಲಾಖೆಯ ಸಿಬ್ಬಂದಿ ಮಾತ್ರ). ದಿನಾಂಕ: 1.1.2019ರಂದು ಇದ್ದಂತೆ ಹೊರಡಿಸಿರುವ ಎಲ್ಲಾ ವೃಂದದ ನೌಕರರ ತಾತ್ಕಾಲಿಕ ಪದಕ್ರಮ ಪಟ್ಟಿಗಳು. ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್ ಕನ್ನಡ | English
ಹಿಂದಿನ ಪುಟಕ್ಕೆ
ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನ ಶಿಷ್ಯವೇತನ:
ಪಿ.ಹೆಚ್.ಡಿ ಪೂರ್ಣಾವಧಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಫೆಲೋಶಿಪ್
(ಲೆಕ್ಕಶೀರ್ಷಿಕೆ ರಾಜ್ಯವಲಯ ಯೋಜನೆ 2225-03-277-2-37)(2019-20ನೇ ಸಾಲಿನ ತರಬೇತಿ, ಅರಿವು ಮತ್ತು ಪ್ರೋತ್ಸಾಹ, ಹಿಂದುಳಿದ
ವರ್ಗಗಳ ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮದಡಿ ಒದಗಿಸಿರುವ ಆಯವ್ಯಯ ರೂ.5400.00 ಲಕ್ಷಗಳಲ್ಲಿ ಹಂಚಿಕೆ ಮಾಡಲಾಗುವುದು)
ಪೂರ್ಣಾವಧಿ ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಡಿ.ದೇವರಾಜ ಅರಸುರವರ ಜನ್ಮ ಶತಮಾನೋತ್ಸವದ ಅಂಗವಾಗಿ
2015-16ನೇ ಸಾಲಿನಿಂದ ಮಾಸಿಕ ರೂ.5,000/- ದಂತೆ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ನೀಡಿ, ಉನ್ನತ ಶಿಕ್ಷಣ/ಸಂಶೋಧನೆಯಲ್ಲಿ ತೊಡಗಿಕೊಳ್ಳಲು
ನೆರವು ನೀಡಲಾಗುತ್ತಿದೆ. 2018-19 ನೇ ಸಾಲಿನಿಂದ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ಮಾಸಿಕ ರೂ.5000/- ದಿಂದ ರೂ.10,000/- ಕ್ಕೆ ಹೆಚ್ಚಿಸಿ ಆದೇಶಿಸಿದೆ.
ಅ) ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‍ನ ಮೊತ್ತ ಮತ್ತು ಅವಧಿ
1.ಈ ಯೋಜನೆಯಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ.10,000/- ದಂತೆ ಗರಿಷ್ಠ 3 ವರ್ಷಗಳ ಅವಧಿಗೆ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ಅಭ್ಯರ್ಥಿಯ
ಬ್ಯಾಂಕ್ ಖಾತೆಗೆ ಜಮಾ ಮಾಡುವುದು.
2.ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿಗೆ ಒದಗಿಸತಕ್ಕದ್ದಲ್ಲ.
ಆ) ಅಭ್ಯರ್ಥಿಗೆ ನಿಗದಿಪಡಿಸಿರುವ ಅರ್ಹತೆಗಳು
1.ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
2.ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿರಬೇಕು.
3.ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪೂರ್ಣಾವಧಿ (Full Time) ಪಿಎಚ್.ಡಿ
ಅಧ್ಯಯನದಲ್ಲಿ ತೊಡಗಿರಬೇಕು.
4.ಈ ಸೌಲಭ್ಯವನ್ನು ಪಡೆಯಲಿಚ್ಛಿಸುವ ಅಭ್ಯರ್ಥಿಯು ಭಾರತ ಸರ್ಕಾರ / ಕರ್ನಾಟಕ ಸರ್ಕಾರ / ವಿಶ್ವವಿದ್ಯಾಲಯ
ಅಥವಾ ಇತರೆ ಯಾವುದೇ ಸಂಸ್ಥೆಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‍ಗೆ ಆಯ್ಕೆಯಾಗಿರಬಾರದು.
ಇ) ಶೈಕ್ಷಣಿಕ ಅರ್ಹತೆ
1.ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು.
2.ವಿಶ್ವವಿದ್ಯಾಲಯ/ಅಧಿಕೃತ ಸಂಸ್ಥೆಗಳಲ್ಲಿನ ಸಂಶೋಧನಾ ಮಾರ್ಗದರ್ಶಕರಡಿಯಲ್ಲಿ ಪಿಎಚ್.ಡಿ
ಅಧ್ಯಯನಕ್ಕಾಗಿ ನೋಂದಣಿ ಮಾಡಿಕೊಂಡಿರಬೇಕು.
3.ಈ ನೋಂದಣಿಯು ವ್ಯಾಸಂಗ ವೇತನ/ಫೆಲೋಶಿಪ್‍ಗಾಗಿ ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಹಿಂದಿನ 2 ವರ್ಷಗಳೊಳಗಿದ್ದು,
ಅರ್ಜಿ ಸಲ್ಲಿಸುವ ಸಾಲಿನಿಂದ ಪ್ರಥಮ ವರ್ಷದ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರಬೇಕು.
4.ಈ ಸೌಲಭ್ಯವನ್ನು ಪಡೆಯಲಿಚ್ಛಿಸುವ ಅಭ್ಯರ್ಥಿಯು ಭಾರತ ಸರ್ಕಾರ / ಕರ್ನಾಟಕ ಸರ್ಕಾರ / ವಿಶ್ವವಿದ್ಯಾಲಯ
ಅಥವಾ ಇತರೆ ಯಾವುದೇ ಸಂಸ್ಥೆಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‍ಗೆ ಆಯ್ಕೆಯಾಗಿರಬಾರದು.
ವಯೋಮಿತಿ:
ಅಭ್ಯರ್ಥಿಯ ಗರಿಷ್ಠ ವಯೋಮಿತಿ 35 ವರ್ಷಗಳು.
ಕುಟುಂಬದ ಒಟ್ಟು ವಾರ್ಷಿಕ ಆದಾಯಮಿತಿ:
ಪ್ರವರ್ಗ-1 - ರೂ.4.50 ಲಕ್ಷ.
ಪ್ರವರ್ಗ-2(ಎ), 3(ಎ) ಮತ್ತು 3(ಬಿ) - ರೂ.3.50 ಲಕ್ಷ.
1.ಕೇಂದ್ರ / ರಾಜ್ಯ ಸರ್ಕಾರಿ / ಅನುದಾನಿತ ಸಂಸ್ಥೆ / ಸಾರ್ವಜನಿಕ ಸ್ವಾಮ್ಯತೆಗೆ ಒಳಪಟ್ಟ ಸಂಸ್ಥೆಗಳ
ಉದ್ಯೋಗಿಗಳು ಈ ಸೌಲಭ್ಯವನ್ನು ಪಡೆಯಲು ಅರ್ಹರಲ್ಲ.
2.ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
3.ಒಬ್ಬ ಅಭ್ಯರ್ಥಿಗೆ ಒಂದು ಬಾರಿ ಮಾತ್ರ ಪಿಎಚ್.ಡಿ ಅಧ್ಯಯನಕ್ಕಾಗಿ ಈ ಸೌಲಭ್ಯವನ್ನು ಒದಗಿಸುವುದು.