2017-18ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ನೀಡುವ ಐ.ಎ.ಎಸ್, ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಪೂರ್ವ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಡೆಸುವ ಮೂಲ ದಾಖಲೆಗಳ ಪರಿಶೀಲನೆ ಮತ್ತು ಕೌನ್ಸಿಲಿಂಗ್ ನಡೆಯುವ ದಿನಾಂಕ : 20.07.2017 ಮತ್ತು 21.07.2017.ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ. 2017-18ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ನೀಡುವ ಐ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ಪರೀಕ್ಷಾ ಪೂರ್ವ ತರಬೇತಿಯ ಆಯ್ಕೆಗಾಗಿ ದಿನಾಂಕ: 25.06.2017 ರಂದು ಅಭ್ಯರ್ಥಿಗಳಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ. ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2017-18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-“ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05.08.2017. 2016-17ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ/ದ್ವಿತೀಯ ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡಿ ಮಾರ್ಚ್ ಮತ್ತು ಏಪ್ರಿಲ್ 2017 ರಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31.07.2017. 2017-18 ನೇ ಸಾಲಿಗೆ ಡಿ.ದೇವರಾಜ ಅರಸು ವಿದೇಶಿ ‍ವ್ಯಾಸಂಗ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 31.07.2017 ರ ವರೆಗೆ ವಿಸ್ತರಿಸಲಾಗಿದೆ ಅಡುಗೆಯವರು ಹಾಗೂ ಅಡುಗೆ ಸಹಾಯಕರ ಹುದ್ದೆಗಳ ನೇರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ 2017-18 ನೇ ಸಾಲಿಗೆ IIM/IIT/IISc ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಅಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29.07.2017 2016-17-ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳ ಮಾಹಿತಿಯನ್ನು ಇಲಾಖೆಯ ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ.
ಹಿಂದಿನ ಪುಟಕ್ಕೆ
ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನ:
ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನ
(ಲೆಕ್ಕಶೀರ್ಷಿಕೆ ರಾಜ್ಯವಲಯ ಯೋಜನೆ 2225-03-277-2-52 ಮತ್ತು ಜಿಲ್ಲಾವಲಯ
ಯೋಜನೆ ಮತ್ತು ಯೋಜನೇತರ 2225-00-103-0-66) (2016-17ನೇ ಸಾಲಿನ
ಆಯವ್ಯಯ ರೂ.17173.24 ಲಕ್ಷಗಳು)
ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನದ ದರಗಳು
(ಸರ್ಕಾರದ ಆದೇಶ ಸಂ.ಬಿಸಿಡಬ್ಲ್ಯೂ 620 ಬಿಎಂಎಸ್ 2014, ದಿನಾಂಕ 7.1.2015ರಂತೆ)
ತರಗತಿ ಬಾಲಕ/ಬಾಲಕಿ Adhoc Grant ಒಟ್ಟು
1 ರಿಂದ 5 250/- 500/- 750/-
6 ರಿಂದ 8 400/- 500/- 900/-
9 ರಿಂದ 10 500/- 500/- 1000/-
ಅರ್ಹತೆಗಳು:
1.ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.
2.ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.44,500/-ರ ಒಳಗೆ ಇರಬೇಕು.
3.ಸರ್ಕಾರದ / ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ /ಅನುದಾನರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುವ
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಹರು.
4.ಸರ್ಕಾರದ / ಸರ್ಕಾರದ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ/ವಸತಿಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ
ಗಳು ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುವುದಿಲ್ಲ.
5.ಹಿಂದಿನ ತರಗತಿಯಲ್ಲಿ ಶೇ.75 ಕ್ಕಿಂತ ಹೆಚ್ಚು ಹಾಜರಾತಿ ಹೊಂದಿದವರು ಮಾತ್ರ ಅರ್ಹರು.
6.ಹಿಂದಿನ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು, ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುವುದಿಲ್ಲ.
ಆಯ್ಕೆ ವಿಧಾನ:
1.ಮೊದಲನೇ ಆದ್ಯತೆ: ಎಲ್ಲಾ ಅರ್ಹ ನವೀಕರಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು ಮಾಡುವುದು.
2.ಎರಡನೇ ಆದ್ಯತೆ: ಹಿಂದುಳಿದ ವರ್ಗಗಳ ಪ್ರವರ್ಗ-1ರ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಮಂಜೂರು ಮಾಡುವುದು.
3.ಮೂರನೇ ಆದ್ಯತೆ: ಉಳಿದ ಮೊತ್ತವನ್ನು ಅರ್ಹವಿರುವ ಪ್ರವರ್ಗ-2ಎ, 3ಎ, 3ಬಿ ಮತ್ತು ಇತರೆ ಹಿಂದುಳಿದ ವರ್ಗಗಳ(ಕೇಂದ್ರ
ಸರ್ಕಾರದ ಹಿಂದುಳಿದ ವರ್ಗದ ಪಟ್ಟಿಯಲ್ಲಿ ಇರುವ ಜಾತಿಗಳು ಮಾತ್ರ) ವಿದ್ಯಾರ್ಥಿಗಳಿಗೆ ಆದಾಯ ಮತ್ತು ಅರ್ಹತೆಯ ಆಧಾರದ
ಮೇಲೆ ಈ ಕೆಳಕಂಡ ಪ್ರಮಾಣದಂತೆ ಮಂಜೂರು ಮಾಡಲಾಗುವುದು.
1 ಪ್ರವರ್ಗ - 2ಎ ಶೇಕಡ 61
2 ಪ್ರವರ್ಗ – 3ಎ ಶೇಕಡ 17
3 ಪ್ರವರ್ಗ – 3ಬಿ ಶೇಕಡ 21
4 ಇತರೆ ಹಿಂದುಳಿದ ವರ್ಗ ಶೇಕಡ 01
ಒಟ್ಟು ಶೇಕಡ 100
ಮಂಜೂರಾತಿ ವಿಧಾನ:
1.ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ವಿದ್ಯಾರ್ಥಿಗಳು ಮಾಹಿತಿಯನ್ನು ಸಂಬಂಧಪಟ್ಟ ಶಾಲೆಗೆ ಸಲ್ಲಿಸಲು
ಸಾರ್ವಜನಿಕ ಪ್ರಕಟಣೆ ಹೊರಡಿಸುವುದು.
2.ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರುಗಳಿಂದ ನಿಗದಿತ ನಮೂನೆ
ಯಲ್ಲಿ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಮಾಹಿತಿ ಹಾಗೂ ಬ್ಯಾಂಕ್ ಖಾತೆ, ಐ.ಎಫ್.ಎಸ್.ಸಿ ಕೋಡ್, ಜಾತಿ ಮತ್ತು
ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ ಫಲಿತಾಂಶ, ಆಧಾರ್ ಸಂಖ್ಯೆ ಇತ್ಯಾದಿ ವಿವರಗಳನ್ನು ಪಡೆಯುವುದು.
3.ಇಲಾಖೆಯ ಮೆಟ್ರಿಕ್-ಪೂರ್ವ ವಿದ್ಯಾರ್ಥಿವೇತನ ಇ-ಪಾಸ್ ತಂತ್ರಾಂಶದಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ಭರ್ತಿ ಮಾಡುವುದು.
4.ಭರ್ತಿ ಮಾಡಿರುವ ಮಾಹಿತಿಯನ್ನು ಪರಿಶೀಲಿಸಿ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ದೃಢೀಕರಿಸುವುದು.
5.ಆಯಾ ವರ್ಷದ ಆಯವ್ಯಯಕ್ಕೆ ಅನುಗುಣವಾಗಿ ಮೀಸಲಾತಿ ನೀತಿಯನ್ವಯ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು
ಮಂಜೂರು ಮಾಡಿ ಖಜಾನೆಯಿಂದ ಚೆಕ್ ಪಡೆದು, ಸಂಬಂಧಿತ
ಮಂಜೂರಾತಿ ಪ್ರಕ್ರಿಯೆಯ ವೇಳಾಪಟ್ಟಿ
1 ಅವಶ್ಯಕ ದಾಖಲಾತಿಗಳನ್ನು ವಿದ್ಯಾರ್ಥಿಗಳು ಸಂಬಂಧಪಟ್ಟ ಶಾಲೆಗಳಿಗೆ ಸಲ್ಲಿಸುವಂತೆ ಸಾರ್ವಜನಿಕ ಪ್ರಕಟಣೆ ಹೊರಡಿಸುವುದು ಜೂನ್ 15
2 ಶಾಲೆಗಳ ಮುಖ್ಯೋಪಾಧ್ಯಾಯರುಗಳಿಗೆ ಸೂಕ್ತ ಸೂಚನೆಗಳನ್ನು ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳ ಮೂಲಕ ನೀಡುವುದು ಜೂನ್ 15
3 ನಿಗದಿತ ನಮೂನೆಗಳನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಸ್ತಾಂತರಿಸುವುದು ಜೂನ್ 20
4 ಸಂಬಂಧಪಟ್ಟ ಶಾಲೆಗಳಿಂದ ಭರ್ತಿ ಮಾಡಿದ ನಮೂನೆಗಳನ್ನು ಮತ್ತು ದಾಖಲತಿಗಳನ್ನು ಕ್ಷೇತ್ರ ಶಿಕ್ಷಣಾದಿಕಾರಿಗಳ ಮೂಲಕ
ವಾಪಸ್ಸು ಪಡೆಯುವುದು
ಜುಲೈ 10
5 ಇಲಾಖೆಯ ಸಾಫ್ಟ್‍ವೇರ್‍ನಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಯ ಸಂಖ್ಯೆ ಐ.ಎಫ್.ಎಸ್.ಸಿ. ಕೋಡ್, ಆಧಾರ್ ಕಾರ್ಡ್
ಸಂಖ್ಯೆ ಹಾಗೂ ಜಾತಿ ಮತ್ತು ಆದಾಯದ ವಿವರಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ
ಯಲ್ಲಿ ಎಂಟ್ರಿ ಮಾಡುವುದು.
ಆಗಸ್ಟ್-10
6 ಆನ್‍ಲೈನ್ ಮಂಜೂರಾತಿ ನೀಡುವುದು ಅನುದಾನ ಲಭ್ಯತೆ ಹಾಗೂ ಬಿಡುಗಡೆ
ಆಧಾರದಲ್ಲಿ ಕ್ರಮ ಕೈಗೊಳ್ಳುವುದು.
7 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವಿದ್ಯಾರ್ಥಿವೇತನ ಮೊತ್ತವನ್ನು ಜಮಾ ಮಾಡುವುದು