ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಾಮಾನ್ಯ, ಮಾದರಿ, ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್ ಮತ್ತು ಇಂಜಿನಿಯರಿಂಗ್& ವೈದ್ಯಕೀಯ ವಿದ್ಯಾರ್ಥಿ ನಿಲಯಗಳಲ್ಲಿ ಸಂಖ್ಯಾಬಲ ಹೆಚ್ಚಳದಿಂದ ಉದ್ಬವವಾಗಿರುವ ಸ್ಥಾನಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.02.2020 2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಐ.ಎ.ಎಸ್, ಕೆ.ಎ.ಎಸ್ ಮತ್ತು ಬ್ಯಾಂಕಿಂಗ್ ಪಿ.ಒ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ದಿನಾಂಕ:08.09.2019 ರಂದು ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ. ದಿನಾಂಕ: 1.1.2019 ರಂದು ಇದ್ದಂತೆ ಹೊರಡಿಸಿರುವ ಎಲ್ಲಾ ವೃಂದದ ನೌಕರರ ಅಂತಿಮ ಪದಕ್ರಮ ಪಟ್ಟಿಗಳು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇವಾ (ವೃಂದ ಮತ್ತು ನೇಮಕಾತಿ) ನಿಯಮಗಳು-2019 ದಿನಾಂಕ: 1.1.2019ರಂದು ಇದ್ದಂತೆ ಹೊರಡಿಸಿರುವ ಎಲ್ಲಾ ವೃಂದದ ನೌಕರರ ತಾತ್ಕಾಲಿಕ ಪದಕ್ರಮ ಪಟ್ಟಿಗಳು. ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್ ಕನ್ನಡ | English
ಹಿಂದಿನ ಪುಟಕ್ಕೆ
ಕಾನೂನು ಪದವೀಧರರಿಗೆ ಶಿಷ್ಯವೇತನ:
ಕಾನೂನು ಪದವೀಧರರಿಗೆ ಶಿಷ್ಯವೇತನ
(ಲೆಕ್ಕಶೀರ್ಷಿಕೆ ಜಿಲ್ಲಾವಲಯ ಯೋಜನೆ 2225-00-103-0-58) (2019-20ನೇ ಸಾಲಿನ ಆಯವ್ಯಯ ರೂ.576.00 ಲಕ್ಷ)
ಕಾನೂನು ಪದವಿಯನ್ನು ಪಡೆದಿರುವ ಹಿಂದುಳಿದ ವರ್ಗಗಳ ನಿರುದ್ಯೋಗಿ ಅಭ್ಯರ್ಥಿಗಳಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಲಾಗುತ್ತಿದೆ.
ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಅರ್ಹತೆ:
1.ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ 1 ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ ಹಾಗೂ ಪ್ರವರ್ಗ 2 (ಎ),
3 (ಎ) ಮತ್ತು 3 (ಬಿ) ಅಭ್ಯರ್ಥಿಗಳಿಗೆ ರೂ.2.50 ಲಕ್ಷಗಳು.
2.ಪ್ರವರ್ಗ-1 ರ ಅಭ್ಯರ್ಥಿಗಳಿಗೆ 31 ವರ್ಷಗಳು ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 30 ವರ್ಷ ಗರಿಷ್ಠ ವಯೋಮಿತಿ ಇರುತ್ತದೆ.
3.ಅರ್ಭರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ಹೆಸರನ್ನು ನೋಂದಾಯಿಸಿರಬೇಕು. ತರಬೇತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ
ಹಿಂದೆ 2 ವರ್ಷಗಳೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
4.ಅವಧಿ: 4 ವರ್ಷಗಳ ಅವಧಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ.
5.ಅಭ್ಯರ್ಥಿಗಳ ಸಂಖ್ಯೆ ಪ್ರತಿ ಜಿಲ್ಲೆಯಲ್ಲಿ ಗರಿಷ್ಠ 10 ಅಭ್ಯರ್ಥಿಗಳು (ಜಿಲ್ಲಾವಲಯ ಕಾರ್ಯಕ್ರಮವಾಗಿದೆ)