ಹಿಂದಿನ ಪುಟಕ್ಕೆ
ಕಾಂಕ್ರಿಟ್ ರಸ್ತೆ ಮತ್ತು ಚರಂಡಿ:
ಕಾಂಕ್ರಿಟ್ ರಸ್ತೆ ಮತ್ತು ಚರಂಡಿ
ಯೋಜನೆಯ ಉದ್ದೇಶ:
ಅಲೆಮಾರಿ / ಅರೆ ಅಲೆಮಾರಿ ಜನಾಂಗದವರು ಹೆಚ್ಚಾಗಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಹಾಗೂ ಹೊಸದಾಗಿ ನಿರ್ಮಾಣ ಮಾಡಿದ ಬಡಾವಣೆಗಳಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ನಿರ್ಮಾಣವನ್ನು ಮಾಡಿ ನಾಗರೀಕ ಸೌಲಭ್ಯವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶ.
ನಿಬಂಧನೆಗಳು:
1 ಅಲೆಮಾರಿ / ಅರೆ ಅಲೆಮಾರಿ ಜನಾಂಗದವರು ಹೆಚ್ಚಾಗಿ ವಾಸಿಸುತ್ತಿರುವ ಕಾಲೋನಿಗಳು ಹಾಗೂ ಹೊಸದಾಗಿ ನಿರ್ಮಿಸಿರುವ ಬಡಾವಣೆಗಳಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕಾಗಿ ಪ್ರಸ್ತಾವನೆಯನ್ನು ಆಯಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಆಯುಕ್ತರು,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರಿಗೆ ಸಲ್ಲಿಸತಕ್ಕದ್ದು.
2 “L” OR “V” Shape ನಲ್ಲಿ ಚರಂಡಿ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವುದು.
3 ಕರ್ನಾಟಕ ಅಲೆಮಾರಿ / ಅರೆ ಅಲೆಮಾರಿ ಅಭಿವೃಧ್ಧಿ ಮಂಡಳಿಯ ಸಭೆಯಲ್ಲಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.
4 ಜಿಲ್ಲಾಧಿಕಾರಿಗಳ ಹಂತದಲ್ಲೇ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಮಂಜೂರಾತಿಯನ್ನು ನೀಡಿ, ಅನುಷ್ಠಾನ ಮಾಡುವ ಸಂಸ್ಥೆಗಳನ್ನು ಗುರುತಿಸಿ, ಕಾಮಗಾರಿಯನ್ನು ಅನುಷ್ಠಾನ ಮಾಡುವುದು.