ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಾಮಾನ್ಯ, ಮಾದರಿ, ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್ ಮತ್ತು ಇಂಜಿನಿಯರಿಂಗ್& ವೈದ್ಯಕೀಯ ವಿದ್ಯಾರ್ಥಿ ನಿಲಯಗಳಲ್ಲಿ ಸಂಖ್ಯಾಬಲ ಹೆಚ್ಚಳದಿಂದ ಉದ್ಬವವಾಗಿರುವ ಸ್ಥಾನಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.02.2020 2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಕಾರ್ಯಕ್ರಮದಡಿ ದಿನಾಂಕ: 28.01.2020 ರಂದು ನಡೆಸುವ ಸಂದರ್ಶನಕ್ಕೆ ಹಾಜರಾಗಬೇಕಾದ ವಿದ್ಯಾರ್ಥಿಗಳ ಪಟ್ಟಿ ಬ್ಯಾಂಕಿಂಗ್ ಪರೀಕ್ಷಾ ಪೂರ್ವ ತರಬೇತಿ 2019-20ಕ್ಕೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮತ್ತು ಕೌನ್ಸಿಲಿಂಗ್. ದಿನಾಂಕ: 1.1.2019 ರಂದು ಇದ್ದಂತೆ ಹೊರಡಿಸಿರುವ ಎಲ್ಲಾ ವೃಂದದ ನೌಕರರ ಅಂತಿಮ ಪದಕ್ರಮ ಪಟ್ಟಿಗಳು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇವಾ (ವೃಂದ ಮತ್ತು ನೇಮಕಾತಿ) ನಿಯಮಗಳು-2019 ದಿನಾಂಕ: 1.1.2019ರಂದು ಇದ್ದಂತೆ ಹೊರಡಿಸಿರುವ ಎಲ್ಲಾ ವೃಂದದ ನೌಕರರ ತಾತ್ಕಾಲಿಕ ಪದಕ್ರಮ ಪಟ್ಟಿಗಳು. ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್ ಕನ್ನಡ | English
ಹಿಂದಿನ ಪುಟಕ್ಕೆ
ಅಲೆಮಾರಿ / ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ಮಂಡಳಿ:
ಅಲೆಮಾರಿ / ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ಮಂಡಳಿ
ಅಲೆಮಾರಿ / ಅರೆ ಅಲೆಮಾರಿ ಜನಾಂಗದವರ ಅಭಿವೃದ್ಧಿಗಾಗಿ ಪರಿಣಾಮಕಾರಿಯಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅನುಕೂಲವಾಗುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ರಾಜ್ಯ ಮಟ್ಟದಲ್ಲಿ ಅಲೆಮಾರಿ / ಅರೆ ಅಲೆಮಾರಿ ಅಭಿವೃದ್ಧಿ ಮಂಡಳಿಯನ್ನು ಸರ್ಕಾರದ ಆದೇಶ ಸಂಖ್ಯೆ:ಸಕ ಇ 186 ಬಿಎಂಎಸ್ 2011 ಬೆಂಗಳೂರು ದಿನಾಂಕ:16-07-2011 ರಲ್ಲಿ ರಚಿಸಲಾಗಿದೆ. ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರ ವಿವರ ಈ ಕೆಳಗಿನಂತಿದೆ.
ಕ್ರ.ಸಂ. ಹೆಸರು ವಿವರ
1 ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧ್ಯಕ್ಷರು
2 ಸರ್ಕಾರದ ಕಾರ್ಯದರ್ಶಿಗಳು, ಕಂದಾಯ ಇಲಾಖೆ ಸದಸ್ಯರು
3 ಸರ್ಕಾರದ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸದಸ್ಯರು
4 ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಸದಸ್ಯರು
5 ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಸದಸ್ಯರು
6 ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸದಸ್ಯರು
7 ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸದಸ್ಯರು
8 ವ್ಯವಸ್ಥಾಪಕ ನಿರ್ದೇಶಕರು, ರಾಜೀವ್ ಗಾಂದಿ ಗ್ರಾಮೀಣ ವಸತಿ ನಿಗಮ ನಿಯಮಿತ ಸದಸ್ಯರು
9 ನಿರ್ದೇಶಕರು, ದೇವರಾಜ ಅರಸು ಸಂಶೋಧನಾ ಸಂಸ್ಥೆ ಸದಸ್ಯರು
10 ವ್ಯವಸ್ಥಾಪಕ ನಿರ್ದೇಶಕರು ಡಿ.ದೇವರಾಜ ಅರಸು ಅಭಿವೃದ್ದಿ ನಿಗಮ ನಿಯಮಿತ ಸದಸ್ಯರು
11 ಅಲೆಮಾರಿ / ಅರೆ ಅಲೆಮಾರಿ ಜನಾಂಗದ ನಾಲ್ಕು ಪ್ರತಿನಿಧಿಗಳು (ಸರ್ಕಾರದಿಂದ ನಾಮನಿರ್ದೇಶಿತರಾದವರು) ಸದಸ್ಯರು
12 ಆಯುಕ್ತರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸದಸ್ಯ ಕಾರ್ಯದರ್ಶಿ
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಸೇರಿ, ಅನುಷ್ಠಾನ ಮಾಡಬೇಕಾದ ಈ ಕೆಳಗಿನ ಕಾರ್ಯಕ್ರಮಗಳ ಬಗ್ಗೆ ತೀರ್ಮಾನವನ್ನು ಕೈಗೊಳ್ಳಲಾಗುತ್ತಿದೆ.
1.ವಸತಿ ಸೌಲಭ್ಯವನ್ನು ಒದಗಿಸುವುದು.
2.ಆರ್ಥಿಕ ಸಬಲೀಕರಣ – ಸಹಾಯಧನ ನೀಡಿ, ಸಾಲ ಸೌಲಭ್ಯ ಒದಗಿಸುವುದು. ಮತ್ತು ತರಬೇತಿ ಕೌಶಲ್ಯಗಳನ್ನು ವೃದ್ಧಿಸುವುದು.
3.ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವುದು.
4.ಸಾಮಾಜಿಕ ಮತ್ತು ಆರೋಗ್ಯ ಸುಧಾರಣೆ.
5.ಸಾಂಸ್ಕೃತಿಕ ಉನ್ನತೀಕರಣ.
ಈ ಸಮಿತಿಯು ಅಲೆಮಾರಿ / ಅರೆ ಅಲೆಮಾರಿ ಜನಾಂಗದವರ ಅಭಿವೃದ್ಧಿಗಾಗಿ ಯೋಜನೆಗಳನ್ನು ಮತ್ತು ಮಾರ್ಗಸೂಚಿಗಳನ್ನು ರೂಪಿಸಿ, ಕಾರ್ಯಕ್ರಮಗಳ ಅನುಷ್ಠಾನದ ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಹೊಂದಿರುತ್ತದೆ.